ಉಡುಪಿ: ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಾಜಿ ಸಚಿವ ರಮಾನಾಥ ರೈ (Ramanath Rai) ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಸಾಣೂರು ಜಂಕ್ಷನ್ನಲ್ಲಿ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದೆ. ಕಾರ್ಕಳದಿಂದ ಮೂಡುಬಿದ್ರೆ ಕಡೆಗೆ ಹೋಗುತ್ತಿದ್ದ ಬಸ್, ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಾಜಿ ಸಚಿವ ರಮಾನಾಥ ರೈಗೆ ಗಾಯವಾಗಿದೆ. ಕಾರಿನಲ್ಲಿ ಸಿಲುಕಿದ್ದ ರಮಾನಾಥ ರೈ ಅವರನ್ನು ಹರಸಾಹಸಪಟ್ಟು ಸ್ಥಳೀಯರು ಹೊರಕರೆತಂದಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಹಾಗೂ ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಇಂದು ರಾಮನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮಧ್ಯಾಹ್ನ 3:30ರ ಸುಮಾರಿಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಜಂಕ್ಷನ್ ಬಳಿ ಅಪಘಾತಕ್ಕೆ ಒಳಗಾಯಿತು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.